ಲಿಂಗ ರಾಮಲಿಂಗ ಎನ್ನಂತರಂಗ
ಮಂಗಳಾಂಗನೆ ಸರ್ವೋತ್ತುಂಗನೇ ||ಪ||
ಮಂದಾಕಿನಿಧರಗೆ ಗಂಗಾಂಬು ಮಜ್ಜನವೇ
ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೇ
ಇಂದು ರವಿ ನೇತ್ರನಿಗೆ ಕರ್ಪೂರದಾರತಿಯೇ
ಕಂದರ್ಪ ಜಿತಗೆ ಮಿಗಿಲಾಪೇಕ್ಷೆಯೇ
ಘನ ವಿದ್ಯಾತುರಗೆ ಮಂತ್ರ ಕಲಾಪವೇ?
ಧನಪತಿಯ ಸಖಗೆ ಕೈಕಾಣಿಕೆಯೇ
ಮನೆ ರಜತ ಪರ್ವತಗೆ ಫಣಿಯ ಆಭರಣವೇ
ಮನೋ ನಿಯಾಮಕಗೆ ಎನ್ನ ಬಿನ್ನಹವೇ
ವೈರಾಗ್ಯ ನಿಧಿಗೆ ಈ ವಿಷಯ ಪದಾರ್ಥವೇ
ಗೌರಿಯ ರಮಣಗೆ ಈ ಸ್ತ್ರೋತ್ರವೇ
ವೀರ ರಾಘವ ವಿಜಯ ವಿಠಲನ ನಿಜ ಹಸ್ತ
ವಾರಿಜ ದಳದಿಂದ ಉದ್ಭವಿಸಿದ ||
Lyrics Submitted by Prajwal Deshpande
Lyrics provided by https://damnlyrics.com/